ರಾಷ್ಟ್ರೀಯ ಬಸವ ದಳದ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಬಸವರಾಜ ಧನ್ನೂರ ಅವರು ರಾಜೀನಾಮೆ ನೀಡಿದ್ದಾರೆ. ಮೊನ್ನೆ ಜಹೀರಾಬಾದಗೆ ಬಂದು ನಮ್ಮ ಕೈಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಅವರ ರಾಜೀನಾಮೆಯನ್ನು ನಾವು ಅಂಗೀಕರಿಸಿದ್ದೇವೆ. ನೂತನ ರಾಷ್ಟ್ರಾಧ್ಯಕ್ಷರನ್ನ ಶರಣ ಮೇಳದಲ್ಲಿ ಆಯ್ಕೆ ಮಾಡುತ್ತೇವೆ ಎಂದು ಬಸವ ಧರ್ಮ ಪೀಠದ ಗಂಗಾ ಮಾತಾಜಿ ದ ಪಾಲಿಟಿಕ್ ತಿಳಿಸಿದ್ದಾರೆ.
ಧನ್ನೂರ ಅವರು ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಹೊಸಬರಿಗೆ ಸೇವೆ ಸಲ್ಲಿಸಲು ಅವಕಾಶ ನೀಡುವ ಸಲುವಾಗಿ ಅವರು ನೀಡಿರುವ ರಾಜೀನಾಮೆಯನ್ನು ಸ್ವೀಕರಿಸಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ.