ದ ಪಾಲಿಟಿಕ್

ಪ್ರೀತಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿ ಕೊಲೆ : ಆರೋಪಿ ಬಂದನ

ದ ಪಾಲಿಟಿಕ್ ಡೆಸ್ಕ್

ದ ಪಾಲಿಟಿಕ್ ಡೆಸ್ಕ್

ನಿನ್ನೆ ಸಂಜೆ [ಗುರುವಾರ] ಹುಬ್ಬಳಿಯ ಬಿವಿಬಿ ಕಾಲೇಜು ಆವರಣದಲ್ಲಿ  ಸಹಪಾಠಿ ಫಯಾಜ್ ಚಾಕುವಿನಿಂದ ಇರಿದು ಎಮ್‌ಸಿಎ ಓದುತ್ತಿದ್ದ ನೇಹಾ ಹಿರೇಮಠ ಎಂಬ ವಿದ್ಯಾರ್ಥಿನಿಯನ್ನು ಐದಾರು ಸಲ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೊಲೆಯಾದ ವಿದ್ಯಾರ್ಥಿನಿ ಹುಬ್ಬಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಮಗಳು.

ʼಘಟನೆ ನಡೆದ ಒಂದೆರಡು ತಾಸಿನಲ್ಲೇ  ಆರೋಪಿಯನ್ನು ಬಂದಿಸಲು ಪೊಲೀಸರು ಯಶ್ವಸಿಯಾಗಿದ್ದಾರೆ. ಪ್ರೀತಿ ನಿರಾಕರಿಸಿದ್ದಕ್ಕೆ ಆರೋಪಿ ಕೊಲೆ ಮಾಡಿದ್ದಾನೆಂದು ತಿಳಿದು ಬಂದಿದೆ. ಹೆಚ್ಚಿನ ತನಿಖೆ ಮಾಡಿದ ಮೇಲೆಯೇ ನಿಖರ ಕಾರಣ ಗೊತ್ತಾಗುತ್ತದೆʼ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ. ಕೊಲೆಯಾದ ನೇಹಾ ಸಂಬಂಧಿಕರು ವಿದ್ಯಾನಗರ ಪೊಲೀಸ್‌ ಠಾಣೆ  ಎದುರು ಪ್ರತಿಭಟನೆ ನಡೆಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು  ಒತ್ತಾಯಿಸಿದ್ದಾರೆ.

ಇನ್ನೂ ಬಿಜೆಪಿ ಎಂದಿನಂತೆ ಇದೊಂದು ಲವ್‌ ಜೀಹಾದ್‌ ಪ್ರಕರಣ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮಂಗಮಾಯ ಆಗಿದೆ ಎಂದು ಆರೋಪಿಸಿದೆ.  ಇದು ಕಾಂಗ್ರೆಸ್‌ನ ಮುಸ್ಲಿಂ ಓಲೈಕೆ ರಾಜಕಾರಣದ ಫಲ ಎಂದು ಹರಿಹಾಯ್ದಿದೆ.

ಜಿಲ್ಲಾ ಉಸ್ತುವಾರಿ ಮಂತ್ರಿ ಸಂತೋಷ ಲಾಡ್‌ ʼಕೊಲೆ ಪಾತಕಿಯ ಈಗಾಗಲೆ ಬಂಧನವಾಗಿದೆ. ಕಠಿಣ ಕಾನೂನು ಕ್ರಮ ಕೈಗೊಂಡು ಆರೋಪಿಗೆ ಪಾಠ ಕಲಿಸುತ್ತೇವೆʼ   ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ʼಈ ಹತ್ಯೆ ಖಂಡನೀಯ, ಯುವತಿಯ ಸಾವಿಗೆ ನ್ಯಾಯ ಒದಗಿಸಿಕೊಡುವುದು ನಮ್ಮ ಕರ್ತವ್ಯವಾಗಿದೆʼ ಎಂದು ತಿಳಿಸಿದ್ದಾರೆ.

Share:

ದ ಪಾಲಿಟಿಕ್‌ ಬೆಂಬಲಿಸಿ

ನಿಷ್ಠುರವಾಗಿ, ಸತ್ಯವನ್ನು ಇದ್ದದ್ದು ಇದ್ದ ಹಾಗೆ ಹೇಳುವುದು ದ ಪಾಲಿಟಿಕ್‌ ಪತ್ರಿಕೆಯ ಮೂಲಗುಣ. ಎಲ್ಲಾ ಬಗೆಯ ಅಧಿಕಾರಸ್ಥರನ್ನು ಪ್ರಶ್ನಿಸುವುದು, ತೀಕ್ಷ್ಣ ವಿಶ್ಲೇಷಣೆಗಳ ಮೂಲಕ ಜನಸಮೂಹಕ್ಕೆ ವಾಸ್ತವಾಂಶವನ್ನು ಮುಟ್ಟಿಸುವುದು ನಮ್ಮ ಧ್ಯೇಯ. ಇದು ನಿಮ್ಮ ಬೆಂಬಲವಿಲ್ಲದೇ ಸಾಧ್ಯವಿಲ್ಲ. ನಮಗೆ ಹಣವಂತರ ಹಂಗು ಬೇಕಿಲ್ಲ; ನಿಮ್ಮ ಆರ್ಥಿಕ ಬೆಂಬಲ ಹಾಗೂ ನಿಮ್ಮದೇ ಉಸ್ತುವಾರಿ ಸಾಕು. ನಮ್ಮನ್ನು ಬೆಂಬಲಿಸಿ.

error: Content is protected !!